ನ್ಯಾಯ ದೇಗುಲದಲ್ಲೇ ನೆತ್ತರು: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

Ravi Talawar
ನ್ಯಾಯ ದೇಗುಲದಲ್ಲೇ ನೆತ್ತರು: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ
WhatsApp Group Join Now
Telegram Group Join Now

ಬೆಂಗಳೂರು,ಏ.03: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರ್ತಿಸಲಾಗಿದೆ.

ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಶ್ರೀನಿವಾಸ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

WhatsApp Group Join Now
Telegram Group Join Now
Share This Article