ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

Ravi Talawar
ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
WhatsApp Group Join Now
Telegram Group Join Now

ಬಳ್ಳಾರಿ,01. ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನ ಮೇರೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಂಡೂರು ತಾಲ್ಲೂಕಿನ ತೋರಣಗಲ್ಲು ರೈಲ್ವೇ ನಿಲ್ದಾಣ, ಜಿಂದಾಲ್ ಮೊದಲನೇ ಗೇಟ್ ಮಂಭಾಗ ಹಾಗೂ ಹೊಸಪೇಟೆ ಬೈಪಾಸ್ ರಸ್ತೆಯ ಮುಂತಾದ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮೂಲಕ ಅಕಸ್ಮಿಕ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
ತೋರಣಗಲ್ ನ ನಾಡಕಚೇರಿಯಲ್ಲಿ ಶನಿವಾರ ಸಂಡೂರು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಈ ಬಾಲಕಾರ್ಮಿಕರ ಆಕಸ್ಮಿಕ ದಾಳಿ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ವಶಕ್ಕೆ ಪಡೆದುಕೊಂಡು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಳ್ಳಲಾಯಿತು. ಆ ಮಕ್ಕಳನ್ನು ಶಿಕ್ಷಣ ಇಲಾಖೆ ಹಾಗೂ ಪೋಷಕರ ವಶಕ್ಕೆ ಒಪ್ಪಿಸಲಾಯಿತು.
ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಕುರಿತು ಜಾಗೃತಿ ಜಾಗೃತಿ ಮೂಡಿಸಲಾಯಿತು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಸಂಡೂರು ತಹಶೀಲ್ದಾರ ಅನೀಲ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಎಸ್.ಖೈನೂರು, ಸಂಡೂರು ಕಾರ್ಮಿಕ ನಿರೀಕ್ಷಕ ಮಂಜುನಾಥ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ, ತೋರಣಗಲ್ಲು ಪಂಚಾಯತಿ ಅಭಿವೃದ್ದಿ ಅಧಿಕಾರಿ ಕಲ್ಲಪ್ಪ, ಕೈಗಾರಿಕಾ ವಿಸ್ತರಣಾಧಿಕಾರಿ ಚೈತ್ರ ಎನ್.ಕೆ., ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಕಂದಾಯ ಅಧಿಕಾರಿ ಗಣೇಶ್, ರೀಚ್ ಸಂಸ್ಥೆಯ ಸಂಯೋಜಕ ಹನುಮಂತಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
WhatsApp Group Join Now
Telegram Group Join Now
Share This Article