ಎಸ್.ಟಿ) ಮೀಸಲಾತಿ ಪಟ್ಟಿಗೆ ಅನ್ಯ ಸಮುದಾಯ; ಸರ್ಕಾರ ನಿರ್ಧಾರ ವಿರುದ್ಧ ಪ್ರತಿಭಟನೆ

Ravi Talawar
ಎಸ್.ಟಿ) ಮೀಸಲಾತಿ ಪಟ್ಟಿಗೆ ಅನ್ಯ ಸಮುದಾಯ; ಸರ್ಕಾರ ನಿರ್ಧಾರ ವಿರುದ್ಧ ಪ್ರತಿಭಟನೆ
WhatsApp Group Join Now
Telegram Group Join Now

ಯರಗಟ್ಟಿ: ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಯರಗಟ್ಟಿ ತಾಲೂಕಾ ಘಟಕದಿಂದ ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ಪಟ್ಟಿಗೆ ಅನ್ಯ ಸಮುದಾಯಗಳನ್ನು ಸೇರಿಸಲು ಹುನ್ನಾರ ನಡೆಸುವ ರಾಜ್ಯ ಸರ್ಕಾರ ನಿರ್ಧಾರವನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮೂಲಕ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಸಮುದಾಯದ ಹಿರಿಯರಾದ ಎಸ್. ಎಚ್. ನಾಯ್ಕರ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿರುವ ಹಾಗೂ ಅನ್ಯ ಸಮುದಾಯದವರನ್ನು ಎಸ್.ಟಿ ಪಟ್ಟಿಗೆ ಸೇರಿಸುತ್ತಿರುವುದು ಸಮಂಜಸವಲ್ಲ ಭಾರತ ಸಂವಿಧಾನ ಪರಿಚ್ಚೇಧ ೩೪೧ ಮತ್ತು ೩೪೨ರಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಅನೇಕ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ೧೯೫೦ ಮತ್ತು ಅದರ ನಂತರ ಹೊರಡಿಸಿರುವ ಅಧಿಸೂಚನೆಗಳಡಿ ಮೀಸಲಾತಿ ನೀಡಿ ಅವಕಾಶಗಳನ್ನು ಒದಗಿಸಿರುವುದು ಸರಿಯಷ್ಟೆ, ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದು ೭ ದಶಕಗಳು ಕಳೆಯುತ್ತಾ ಬಂದರೂ ಪರಿಶಿಷ್ಟ ಪಂಗಡದವರ ಮೇಲೆ ನಿರಂತರ ಶೋಷಣೆ, ದಬ್ಬಾಲಿಕೆ, ದೌರ್ಜನ್ಯಗಳು ಮತ್ತು ಮೀಸಲಾತಿಯ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಖಂಡನೀಯ ಎಂದು ಹೇಳಿದರು.

ನಿವೃತ್ತ ತಹಶೀಲ್ದಾರ ಬಾಬಣ್ಣಾ ತಳವಾರ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-೧ ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುವುದನ್ನು ಕೂಡಲೆ ನಿಲ್ಲಿಸುವುದು
ಹಾಗೇನಾದರೂ ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಲ್ಲಿ ಕರ್ನಾಟಕ ಉಚ್ಚನ್ಯಾಯಲಯದ ಆದೇಶದಂತೆ ಅಂತಹವರ ಮೇಲೆ ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದೆ. ಈ ನಕಲಿ ಜಾತಿ ಪ್ರಮಾಣ ಪತ್ರಗಳಿಗೆ ಮೂಲ ಕಾರಣ ವೃತ್ತಿಗಾಗಿ ನಾಯಕ ತಳವಾರ ಜಾತಿಗೆ ಸೇರದೆ ಇತರೆ ಜಾತಿಗೆ ಅಂದರೆ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದವರು ತಳವಾರಿಕೆ ವೃತ್ತಿ ಮಾಡುತ್ತಿದ್ದುದು. ಆದರೆ ನಾಯಕ ತಳವಾರರ ಹೆಸರು ಜಾತಿ ಸೂಚಕ ಪದವಾಗಿರುತ್ತದೆ. ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನದೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಾಗ ಅಲ್ಲಿಂದ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ ೩೮ರಲ್ಲಿ ಸೇರಿಸಿರುವುದು ನಾಯಕ ತಳವಾರ ಜಾತಿ ಮಾತ್ರ, ಆದ್ದರಿಂದ ಬೆಸ್ತ್ರ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದ ತಳವಾರರನ್ನು ಅವರು ಸೇರಿರುವ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-೧ ರ ಕ್ರಮ ಸಂಖ್ಯೆ ೬ ರಲ್ಲಿ ಬೆಸ್ತ ಮುಂತಾದವುಗಳ ಜೊತೆ ಸೇರಿಸಿ ಉದ್ಭವಿಸಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಆಗ್ರಹಿಸಿರು.

ಈ ವೇಳೆ ಸಾ. ತ. ನಾಯ್ಕರ, ಮುದಕಪ್ಪ ಆನಿಗೋಳ, ಮಾರುತಿ ಕುರುಬಗಟ್ಟಿ, ಮಾರುತಿ ಗೋರಗುದ್ದಿ, ಕೆಂಚಪ್ಪ ಬೆಳ್ಳಿಕುಂಪಿ, ಸೋಮನಗೌಡ ಪಾಟೀಲ, ವಿಠ್ಠಲ ನಾಯ್ಕರ, ಅರ್ಜುನ ದಳವಾಯಿ, ಶಶಿಧರ ಪಾಟೀಲ, ಸುರೇಶ ದಾಸಪ್ಪನವರ, ಪ್ರಕಾಶ ಮುರಗೋಡ, ಸಿದ್ದಪ್ಪ ಮಾಳಗಿ, ಪ್ರಕಾಶ ಲಿಂಗರೆಡ್ಡಿ, ಬಿ. ಬಿ. ತಳವಾರ, ಶಿವಪ್ಪ ಹೊಗರ್ತಿ, ಭೀಮಪ್ಪ ದೇಗಾನಟ್ಟಿ, ಶಂಕರ ಮಾದನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article