ನೇಮಕಾತಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆ 

Ravi Talawar
ನೇಮಕಾತಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆ 
WhatsApp Group Join Now
Telegram Group Join Now
ಬಳ್ಳಾರಿ:14.. ನಗರದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ನಗರದ ಕಾಗೆ ಪಾರ್ಕ್ನಿಂದ ಹಳೆ ಡಿ.ಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮೋದಿ,  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.
ಈ ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಶರಣಪ್ಪ ಉದ್ಭಾಳ್  ಮಾತನಾಡುತ್ತಾ, “ನಮ್ಮರಾಜ್ಯದಲ್ಲಿ ಹಿಂದೆಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆಕೋವಿಡ್‌ಕಾರಣ ಹೇಳಿ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿತೋರಿಸುತ್ತಾಕಾಂಗ್ರೆಸ್ ಪಕ್ಷವುತಾನುಅಧಿಕಾರಕ್ಕೆ ಬಂದರೆಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆಅಧಿಕಾರಕ್ಕೆ ಬಂದು ೨ ವರ್ಷ ೪ ತಿಂಗಳು ಕಳೆದರೂ ಸಹ ಒಳ ಮೀಸಲಾತಿ ಹೆಸರಿನಲ್ಲಿಯಾವುದೇ ನೇಮಕಾತಿಯನ್ನು ಮಾಡಿಲ್ಲ. ತಾನು ನೀಡಿದಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರಕಾರ್ಯರೂಪಕ್ಕೆತರುವುದೆAದುಯುವಜನತೆ ನಿರೀಕ್ಷೆಯಲ್ಲಿದ್ದರು.ಆದರೆಅವರ ನಿರೀಕ್ಷೆ ಹುಸಿಯಾಗಿದೆ. ೨೦೨೫-೨೬ ನೇ ಸಾಲಿಗೆ ರಾಜ್ಯದ ೪೩ ಇಲಾಖೆಗಳಲ್ಲಿ ೨,೮೪,೮೮೧ ಹುದ್ದೆಗಳು ಖಾಲಿ ಬಿದ್ದಿವೆ. ಅವುಗಳ ನೇಮಕಕ್ಕೆ ಕಿಂಚಿತ್ತು ಪ್ರಯತ್ನಗಳು ನಡೆಯುತ್ತಿಲ್ಲ. ಕೆಲವು ಕುಂಟುನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ. ರಾಜ್ಯದಎಲ್ಲೆಡೆ ಲಕ್ಷಾಂತರಉದ್ಯೋಗಾಕಾAಕ್ಷಿಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದೆAದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ. ೪-೫ ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದಅದೆಷ್ಟೋಯುವಜನರುತಮ್ಮಅರ್ಹತಾ ವಯಸ್ಸನ್ನು ಮೀರಿದ್ದಾರೆ.ಉದ್ಯೋಗದ ಭರವಸೆಯಿಲ್ಲದೆಯುವಜನರುಆತ್ಮಹತ್ಯೆಯಂತಹಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ.ಇನ್ನೊಂದೆಡೆ ಕೆಪಿಎಸ್‌ಸಿಯ ಅಧ್ಯಕ್ಷರು, ಸದಸ್ಯರ ಒಳಜಗಳ ಮತ್ತುಅದರಲ್ಲಿನ ಭ್ರಷ್ಟಾಚಾರವು ನೇಮಕಾತಿಗಾಗಿಕಾಯುತ್ತಿರುವ ಆಕಾಂಕ್ಷಿಗಳಿಗೆ ಬೇಸರ ತರಿಸಿದೆ.ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ೫೯,೪೫೪ ಹುದ್ದೆಗಳು ಖಾಲಿ ಬಿದ್ದಿವೆ. ಕಲ್ಯಾಣಕರ್ನಾಟಕ ಭಾಗದ ೬ ಜಿಲ್ಲೆಗಳಲ್ಲಿ ೨೧,೩೮೧ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಮತ್ತೊಂದೆಡೆಆರೋಗ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್, ಕಂದಾಯ, ಒಳಾಡಳಿತ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬಹಳ ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದಜನಸಾಮಾನ್ಯರಿಗೆ ಸಿಗಬೇಕಾದ ಸೇವೆಗಳು ಸರಿಯಾಗಿತಲುಪುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆಆಧಾರದಲ್ಲಿತುಂಬಿಕೊAಡು ಪುಡಿಗಾಸಿಗೆ, ಉದ್ಯೋಗ ಭದ್ರತೆ ನೀಡದೇ ದುಡಿಸಿಕೊಳ್ಳಲಾಗುತ್ತಿದೆ” ಎಂದರು.
ಪ್ರತಿಭಟನೆಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಚಾಲಕ ಜಗದೀಶ್ ನೇಮಕಲ್ ಮಾತನಾಡುತ್ತಾ, “ಕಳೆದ ಹಲವಾರು ವರ್ಷಗಳಿಂದಲೂ ನೇಮಕಾತಿಇಲ್ಲದಿದ್ದರೂಜಾತಕ ಪಕ್ಷಿಯಂತೆ ನೇಮಕಾತಿಗಾಗಿಕಾಯುತ್ತಾ, ಸಾವಿರಾರು ರೂಪಾಯಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹಾಗೂ ೨೪*೭ ಗ್ರಂಥಾಲಯಗಳಲ್ಲಿ ಓದಲು ಉದ್ಯೋಗಾಕಾಂಕ್ಷಿಗಳು ಖರ್ಚು ಮಾಡಿಕೊಂಡಿದ್ದಾರೆ. ಹಗಲಿರುಳು ಕೂಲಿ-ನಾಲಿ ಮಾಡಿ, ಸಾಲ ಮಾಡಿ ಪೋಷಕರು ಮಕ್ಕಳಿಗೆ ಕೋಚಿಂಗ್‌ಕೊಡಿಸುತ್ತಿದ್ದಾರೆ. ಇಷ್ಟೆಲ್ಲಾಗಂಭೀರ ಸಮಸ್ಯೆಗಳನ್ನು ಯುವಜನರುಎದುರಿಸುತ್ತಿದ್ದರೂ ಸಹ ಸರ್ಕಾರಗಳು ಈ ಬಗ್ಗೆ ಮಾನವೀಯವಾಗಿ ವರ್ತಿಸುತ್ತಿಲ್ಲ. ಈಗಲಾದರೂ ಸರ್ಕಾರಗಳು ಯಾವುದೇ ನೆಪಗಳನ್ನು ಹೇಳದೆ, ಕೆಲವೇ ಸಾವಿರ ಹುದ್ದೆಗಳ ಭರ್ತಿಗೆ ಸೀಮಿತಗೊಳಿಸದೆ ಎಲ್ಲ ಖಾಲಿ ಹುದ್ದೆಗಳ ಭರ್ತಿಗೆಕೂಡಲೇತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಈ ಪ್ರತಿಭಟನೆಯಲ್ಲಿ ಪ್ರಮೋದ್ ನಿರೂಪಿಸಿದರು. ಸಹ ಸಂಚಾಲಕರಾದ ಪುರುಷೋತ್ತಮ,ಆಂಜನೇಯ ಸದಸ್ಯರಾದ ಸುಜಾತ ನವಲಗುಂದ, ಸುರೇಶ್‌ಎನ್., ಗೋಪಾಲ್, ಮೋಹನ್, ನಾಗರಾಜ್‌ಎನ್., ಮಂಜುನಾಥಟಿ., ಶಿವಶಂಕರ್ ಹಾಗೂ ನೂರಾರುಯುವಜನರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article