ಮುಂಗಾರು ಅಧಿವೇಶನ: ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ

Ravi Talawar
ಮುಂಗಾರು ಅಧಿವೇಶನ: ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 15: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿ ಎಸ್​​ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ನಿಗಮದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾ ನಿರತ ಬಿಜೆಪಿ ನಾಯಕರು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಂತು ಆಕ್ರೋಶ ಹೊರಹಾಕಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯಗೂ ಬಿಜೆಪಿಯ ಪ್ರತಿಭಟನೆ ಬಿಸಿ ತಟ್ಟಿತ್ತು. ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾಗಲೇ ಸಿಎಂ ಕಾರು ಆಗಮಿಸಿತ್ತು. ಈ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು. ಬಿಜೆಪಿ ಪ್ರತಿಭಟನೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ನಾಯಕರು, ಅವರು ಪ್ರತಿಭಟನೆ ಮಾಡಲಿ. ಸದನದೊಳಗೆ ಉತ್ತರ ಕೊಡುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ ಟ್ವೀಟ್ ಮಾಡಿರೋ ರಾಜ್ಯ ಬಿಜೆಪಿ ಘಟಕ, ವಾಲ್ಮೀಕಿ ನಿಗಮದ ಹಣ ಲಪಾಟಾಯಿಸಿ, ಬಸನಗೌಡ ದದ್ದಲ್ ನಾಪತ್ತೆಯಾಗಿದ್ದಾರೆ ಎಂದು ಕುಟುಕಿತ್ತು. ವಯಸ್ಸು 52, ಕಂಡ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಕಾಲೆಳೆದಿತ್ತು.

ಭಾನುವಾರ ಆಂಧ್ರಪ್ರದೇಶದತ್ತ ತೆರಳಿದ್ದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್, ಇವತ್ತು ವಿಧಾನಸೌಧದಲ್ಲಿ ಪ್ರತ್ಯಕ್ಷರಾದರು. ಕಲಾಪದಲ್ಲಿ ಭಾಗಿಯಾಗಲು ವಿಧಾನಸೌಧಕ್ಕೆ ಬಂದರು. ಸದನದಲ್ಲೇ ಮಾತನಾಡುತ್ತೇನೆ. ನನಗೆ ಯಾವ ನೋಟಿಸ್ ಬಂದಿಲ್ಲ ಎಂದರು.

WhatsApp Group Join Now
Telegram Group Join Now
Share This Article