ಬೆಳಗಾವಿ : ಭ್ರಹ್ಮ ವಿದ್ಯಾನಗರ ಮಧುರೆ, ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ ಇವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶಿರ್ವದಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ್, ಉಪ್ಪಾರ ಸಮಾಜದ ಮುಖಂಡರಾದ ಬಸವರಾಜ ಆಯಟ್ಟಿ, ಭೀಮಶಿ ಹಂದಿಗುಂದ, ಕುಶಾಲ ಗುಡೆನ್ನವರ ಇನ್ನಿತರರು ಉಪಸ್ಥಿತರಿದ್ದರು.
ಹಾಗೇ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಇಂದು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.