ಬೆಂಗಳೂರು, ಏಪ್ರಿಲ್ 11: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ.