ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ; ಆರ್ ಅಶೋಕ್, ಬಿವೈ ವಿಜಯೇಂದ್ರ ಆಗ್ರಹ

Ravi Talawar
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ; ಆರ್ ಅಶೋಕ್, ಬಿವೈ ವಿಜಯೇಂದ್ರ ಆಗ್ರಹ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್  ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್​ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿಪಕ್ಷ ನಾಯಕ ಆರ್​ ಅಶೋಕ್​ ಮಾತನಾಡಿ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್​ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

“ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​​ ಹಾಕಿದೆ.

“ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದು ಬಿಜೆಪಿ ಹೇಳಿದೆ.

WhatsApp Group Join Now
Telegram Group Join Now
Share This Article