ಬೆಂಗಳೂರು, ಆಗಸ್ಟ್ 26: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಅನ್ನು ಸಿಪಿ ಯೋಗೇಶ್ವರ್ ಅವರಿಗೆ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್. ಡಿ.ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದ ಹೇಳಿದರು.
ಚನ್ನಪಟ್ಟಣ ಟಿಕೆಟ್ ಯೋಗೇಶ್ವರ್ಗೆ ನೀಡುವಂತೆ ಹೈಕಮಾಂಡ್ ಬಳಿ ಮನವಿ: ಆರ್ .ಅಶೋಕ್
ಕೊಲೆ ಆರೋಪಿ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ಮಾತನಾಡಿದ ಅವರು, ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು. ಇದೆಲ್ಲ ನುಳುಚಿಕೊಳ್ಳುವ ವಿಚಾರ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಇಷ್ಟೆಲ್ಲ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ, ಕೆಲವು ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ, ಯಾವ ಖಾತೆ ಹೋಗುತ್ತದೆ ಅಂತ ಭೀತಿಯಲ್ಲಿದ್ದಾರೆ. ಜೈಲಿನಲ್ಲಿ ನಡೆದ ಘಟನೆ ಬಗ್ಗೆ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.