ರಾಹುಲ್ ಗಾಂಧಿ ಆರೋಪ ಹಾಸ್ಯಾಸ್ಪದ : ರಾಜು ಕುರುಡಗಿ

Ravi Talawar
ರಾಹುಲ್ ಗಾಂಧಿ ಆರೋಪ ಹಾಸ್ಯಾಸ್ಪದ : ರಾಜು ಕುರುಡಗಿ
WhatsApp Group Join Now
Telegram Group Join Now

ಗದಗ: ಮತ ಕಳ್ಳತನದ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಮಸಿ ಬಳಿಯಲು ಯತ್ನಿಸುತ್ತಿರುವ ರಾಹುಲ್ ಗಾಂಧಿ ಹಾಗು ಕಾಂಗ್ರೇಸ್ ಪಕ್ಷದ ನಿಲುವು ಹಾಸ್ಯಾಸ್ಪದವಾಗಿದೆ.ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ರವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ ದೇಶದ ಜನರ ವಿಶ್ವಾಸವನ್ನು ಗಳಿಸುವಲ್ಲಿ ರಾಹುಲ್ ಗಾಂಧಿಯವರು ವಿಫಲರಾಗಿದ್ದಾರೆ.  ಸೋಲಿನ ಅವಮಾನದಿಂದ ಬಳಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ.

ಇಂದಿರಾ ಗಾಂಧಿ ಯವರು ತುರ್ತು ಪರಿಸ್ಥಿತಿ ಹೇರುವುದರ ಮೂಲಕ ಸಂವಿಧಾನದ ಕಗ್ಗೋಲೆ ಮಾಡಿದ್ದರು.  ಈಗ ರಾಹುಲ್ ಗಾಂಧಿ ರವರು ಚುನಾವಣಾ ಆಯೋಗದ ಮೇಲೆ ಸುಳ್ಳು ಅಪವಾದ ಹೊರಿಸುವ ಮೂಲಕ ದೇಶದ ಜನತೆಗೆ ಹಾಗು ಚುನಾವಣಾ ಆಯೋಗಕ್ಕೆ ಅವಮಾನ ಮಾಡುತ್ತಿದ್ದಾರೆ.  ಈ ಸುಳ್ಳು ಆರೋಪದ ಹಿಂದೆ ಕಾಂಗ್ರೆಸ್ ಸಂಚು ರೂಪಿಸುತ್ತಿದೆ.

ಮತ ಕಳ್ಳತನ ಆಗಿದೆ ಎಂದು ತಮ್ಮ ಬಳಿ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಆದಿಯಾಗಿ ಮುಖ್ಯಮಂತ್ರಿ ಸಿದ್ರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳುತ್ತಿದ್ದಾರೆ. ಆದರೆ ಅವರ ಬಳಿ ಪುರಾವೆ ಇದ್ದಿದ್ದರೆ ಅವರು ನ್ಯಾಯಲಕ್ಕೆ ಹೋಗಲಿ ಅದನ್ನ ಬಿಟ್ಟು ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವದು ಹಾಸ್ಯಾಸ್ಪದ.3ನೇ ಬಾರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾರುವುದನ್ನು ಸಹಿಸಿಕೊಳ್ಳದ ಕಾಂಗ್ರೇಸ್ ನಾಯಕರು ಈ ಸುಳ್ಳಿನ ಅಪಪ್ರಚಾರ ಮಾಡುತ್ತಿರುವುದು ದೇಶದ ಮತದಾರರ ಮುಂದೆ ಕಾಂಗ್ರೆಸ್ ಪಕ್ಷದ ನಾಯಕರು ನಗೆಗೆಡಾಗಿದ್ದಾರೆಂದು ರಾಜು ಕುರುಡಗಿ ರವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article