ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.
ಬೀದರ್ನಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಆರವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬಾಗಲಕೋಟೆ, ಬೆಂಗಳೂರು, ಹಾಸನ, ಚಿಂತಾಮಣಿಯಲ್ಲಿ ಕೂಡ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು.