ಬೆಂಗಳೂರು,ಏಪ್ರಿಲ್ 10:ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಏಪ್ರಿಲ್ 12ರಂದು ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.
ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಮಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.