ಬೆಂಗಳೂರು, ಏಪ್ರಿಲ್ 18: ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆ(Rain)ಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ. ಬಿಸಿಲ ತಾಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.