ಕರ್ನಾಟಕದಾದ್ಯಂತ ಚಳಿಯ ಪ್ರಮಾಣ ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ಫೆಬ್ರವರಿ 1ರಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.