ಬೆಂಗಳೂರು, ಏಪ್ರಿಲ್ 1: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್ 3ರಿಂದ ಮಳೆ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.
ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.