ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಕ್ಷಾ ರಾಮಯ್ಯ

Hasiru Kranti
ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಕ್ಷಾ ರಾಮಯ್ಯ
WhatsApp Group Join Now
Telegram Group Join Now

ಡಾ. ಸಿದ್ಧಲಿಂಗ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದ ಯುವ ನಾಯಕ

ತುಮಕೂರು,ಏ, 2; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಂದು ಅನ್ನ, ಅಕ್ಷರ ದಾಸೋಹದ ಕೇಂದ್ರವಾದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ಕಾಯಕಯೋಗಿ. ತ್ರಿವಿಧ ದಾಸೋಹಿಗಳಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಸಿದ್ದಗಂಗಾ ಮಠದ ಡಾ. ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಯುವ ನಾಯಕ ರಕ್ಷಾ ರಾಮಯ್ಯ ಅವರಿಂದ ಆಶೀರ್ವಾದ ಪಡೆದರು.

ಸಿದ್ದಗಂಗಾ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದ ರಕ್ಷಾ ರಾಮಯ್ಯ, ವಿದ್ಯಾರ್ಥಿಗಳು ಖುಷಿ ಜೊತೆಗೆ ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಹೊಸಕೋಟೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article