ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ; ಸರ್ಕಾರದ ಜೊತೆ ಚರ್ಚೆ: ರಾಮಲಿಂಗಾ ರೆಡ್ಡಿ

Ravi Talawar
ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ;  ಸರ್ಕಾರದ ಜೊತೆ ಚರ್ಚೆ: ರಾಮಲಿಂಗಾ ರೆಡ್ಡಿ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು.

ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ಏತನ್ಮಧ್ಯೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ), ಮತ್ತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಅಧಿಕಾರಿಗಳು ದರ ಪರಿಷ್ಕರಣೆ ಅಗತ್ಯವನ್ನು ಒತ್ತಿ ಹೇಳಿದರು. ನಿಗಮಗಳಿಂದ ಉಂಟಾದ ನಷ್ಟವನ್ನು ಸಮತೋಲನಗೊಳಿಸಲು ಮೊದಲನೆಯ ಆದ್ಯತೆಯಾಗಿದೆ ಎಂದಿದ್ದಾರೆ.

ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಆರ್‌ಟಿಸಿ ಯೂನಿಯನ್‌ಗಳ ಸದಸ್ಯರು ಬೆದರಿಕೆ ಹಾಕಿದ್ದರು. ‘ನಾಲ್ಕು ನಿಗಮಗಳಲ್ಲಿ ಹಣದ ಕೊರತೆಯೂ ಬಾಕಿ ವೇತನ ಸಂಗ್ರಹಕ್ಕೆ ಒಂದು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article