ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ; ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ

Ravi Talawar
ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ;  ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​​ 11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ  ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ ವ್ಯಕ್ತಪಡಿಸಿದ್ದಾರೆ.

“ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು” ಎಂದಿದ್ದಾರೆ.

“ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ” ಎಂದು ವಾಗ್ದಾಳಿ ಮಾಡಿದರು. ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article