ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ  ಪ್ರಕರಣ: ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ ದಾಳಿ

Ravi Talawar
ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ  ಪ್ರಕರಣ: ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ ದಾಳಿ
WhatsApp Group Join Now
Telegram Group Join Now

ಬೆಂಗಳೂರು, ಮೇ 21: ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ  ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಎನ್​ಐಎ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಕೊಯಮುತ್ತೂರು ಮತ್ತು ಬೆಂಗಳೂರು ಸೇರಿದಂತೆ 11 ಕಡೆ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ.

 

WhatsApp Group Join Now
Telegram Group Join Now
Share This Article