ಬೆಂಗಳೂರು, ಮೇ 21: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಮೇಶ್ವರಂ ಕೇಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಕೊಯಮುತ್ತೂರು ಮತ್ತು ಬೆಂಗಳೂರು ಸೇರಿದಂತೆ 11 ಕಡೆ ದಾಳಿ ನಡೆಸಿದ್ದಾರೆ.
ಮೂಲಗಳ ಪ್ರಕಾರ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ.