ಬಳ್ಳಾರಿ, ಮಾರ್ಚ್ 8: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದ ವೇಳೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಬಳ್ಳಾರಿಯ ಬಿಜೆಪಿ ನಾಯಕ ಶ್ರೀರಾಮುಲು (B Sriramulu) ಬಯಸಿದ್ದರು. ಆದರೆ, ಇತ್ತೀಚಿಗಷ್ಟೇ ಅವರ ವಿರುದ್ಧ ಮುನಿಸಿಕೊಂಡಿರುವ ಶಾಸಕ ಜನಾರ್ದನ ರೆಡ್ಡಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ರಾಮುಲುಗೆ ಅಮಿತ್ ಶಾ ಭೇಟಿಯಾಗುವ ಅವಕಾಶ ಸಿಗಲಿಲ್ಲ. ಇದು ಸದ್ಯ ಬಳ್ಳಾರಿ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇದೀಗ ಅಮಿತ್ ಶಾ ಬೆಂಗಳೂರಿಗೆ ಬರುವುದನ್ನೇ ರಾಮಲು ಎದುರು ನೋಡುತ್ತಿದ್ದರು. ಶಾ ಅವರೊಂದಿಗಿನ ತಮ್ಮ ಹಳೆಯ ಸ್ನೇಹವನ್ನು ಬಳಸಿಕೊಂಡು, ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಉತ್ಸಾಹದಿಂದ ಇದ್ದರು. ಆದರೆ ರಾಮುಲುಗೆ ಜನಾರ್ದನ ರೆಡ್ಡಿ ಟಕ್ಕರ್ ಕೊಟ್ಟಿದ್ದಾರೆ.