ಬಳ್ಳಾರಿ15…: ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಅಹಿತಕರ ಘಟನೆಯನ್ನು ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕಭರತ್ ರೆಡ್ಡಿ , ಸತೀಶ್ ರೆಡ್ಡಿ ಸೇರಿದಂತೆ ಹಲವರನ್ನು ಅರೆಸ್ಟ್ ಮಾಡಬೇಕು. ಜತೆಗೆ ಸಿಬಿಐ ತನಿಖೆಯಾಗಲಿ, ಆಗದಿದ್ದರೆ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ರವಿಕುಮಾರ್ ಎಂದು ಗುಡುಗಿದರು.
ನಗರದ ಹವಾಂಬಾವಿಯಲ್ಲಿರುವ ಜನಾರ್ದನರೆಡ್ಡಿಯವರ ಗ್ಲಾಸ್‌ಹೌಸ್‌ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ೧ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆ ಮುಂಭಾಗದಲ್ಲಿ ನಡೆದ ಗಲಭೆ ಸಂಬಂಧಿಸಿದಂತೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಜ. ೧೭ರಂದು ಭಾರೀ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜ.೧೭ರಂದು ಬಳ್ಳಾರಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಬೇಕಿತ್ತು. ಆದರೆ ಬ್ಯಾನರ್ ಗಲಾಟೆ ಎಂಬ ನೆಪದಲ್ಲಿ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಲಾಗಿದೆ ಎಂದು ಹೇಳಿದರು.
ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ದುರುದ್ದೇಶದಿಂದಲೇ ಗಲಾಟೆ ನಡೆಸಿದ್ದಾರೆ. ಶಾಸಕ ಜನಾರ್ದನ್ ರೆಡ್ಡಿ ಅವರನ್ನು ಟಾರ್ಗೆಟ್ ಮಾಡಿ,
ಮನೆ ಮೇಲೆ ಫೈರಿಂಗ್ ಮಾಡಲಾಗಿದೆ. ಮಾರಕಾಸ್ತçಗಳನ್ನು ಹಿಡಿದು ದಾಳಿ ನಡೆದಿದೆ. ಗನ್ ಮ್ಯಾನ್‌ಗಳು ಅನುಮತಿ ಇಲ್ಲದೇ ಯಾರೂ ಫೈರಿಂಗ್ ಮಾಡುವುದಿಲ್ಲ. ಮುಂಚಿತವಾಗಿ ಸೂಚನೆ ನೀಡಿಯೇ ಫೈರಿಂಗ್ ಮಾಡಿಸಲಾಗಿದೆ ಎಂದು ಆರೋಪಿಸಿದರು.
ಬ್ಯಾನರ್ ಗಲಾಟೆ ಎಂಬುದು ಕೇವಲ ನೆಪ ಮಾತ್ರ. ಜನಾರ್ದನ ರೆಡ್ಡಿ ಅವರನ್ನು ಅಪಮಾನ ಮಾಡುವ ಉದ್ದೇಶದಿಂದಲೇ ಬ್ಯಾನರ್ ಅನ್ನು ಅವರ ಮನೆ ಕಡೆ ಮುಖಮಾಡಿ ಕಟ್ಟಲಾಗಿದೆ. ಒಬ್ಬ ಶಾಸಕರ ಬಾಯಿಯಲ್ಲಿ ಮನೆ ಸುಟ್ಟುಹಾಕುತ್ತೇನೆ ಎನ್ನುವ ಮಾತುಗಳು ಬರಬಾರದು. ಅದಕ್ಕಾಗಿ ಬಂದಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರು ಯಾರಾದರೂ ಮಾಡಿದ್ರೇ ಇಷ್ಟೊತ್ತಿಗಾಗಲೇ ಎಫ್ ಐಆರ್ ದಾಖಲು ಮಾಡಲಾಗುತ್ತಿತ್ತು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ 33 ಜನರ ಎಫ್ ಐ ಆರ್ ಹಾಕಿದ್ದಾರೆ. ಆದರೆ ಬಳ್ಳಾರಿ ಗಲಭೆ ಪ್ರಕರಣದಲ್ಲಿ ಬಂಧಿಸಿದೇ ಇರುವುದು ಸರ್ಕಾರಸ ನಾಚಿಕೆಗೇಡಿನ ದುರಂತವೇ ಸರಿ ಎಂದರು.
ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಲ್ಲಿ ಗಲಾಟೆ ನಡೆಯುವಾಗ ಸಂವಿಧಾನ ಎಲ್ಲಿಗೆ ಹೋಯಿತು ಎಂದು ಅವರು ಪ್ರಶ್ನಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಮಾತನಾಡಿ, ಜ. ೧೭ರಂದು ಬಳ್ಳಾರಿ ಎಪಿಎಂಸಿ ಮಾರ್ಕೆಟ್ ಪ್ರದೇಶದಲ್ಲಿ ಬಿಜೆಪಿ ಪ್ರತಿಭಟನಾ ಸಮಾವೇಶ ನಡೆಯಲಿದೆ. ಜತೆಗೆ ಜಿಲ್ಲಾಡಳಿತದ ಸಮ್ಮುಖದಲ್ಲಿ ಸ್ಥಳ ನಿಗದಿಪಡಿಸಲಾಗಿದೆ. ಮುನ್ಸಿಪಲ್ ಮೈದಾನದಲ್ಲಿ ಪಿಯುಸಿ ಪರೀಕ್ಷೆಗಳಿರುವ ಹಿನ್ನೆಲೆಯಲ್ಲಿ ಸ್ಥಳ ಬದಲಾವಣೆ ಮಾಡಲಾಗಿದೆ’’ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಆದರೆ ಎಪಿಎಂಸಿಯಲ್ಲಿ ಮೂವತ್ತು ಸಾವಿರ ಜನರಿಗೆ ಮಾತ್ರ ಆಸನ ವ್ಯವಸ್ಥೆ ಇರುವುದರಿಂದ ಅಷ್ಟೇ ಸಂಖ್ಯೆಯಲ್ಲಿ ಜನರನ್ನು ಸೇರಿಸಲಾಗುವುದು. ರಾಷ್ಟಿçÃಯ ನಾಯಕರ ಸಲಹೆಯಂತೆ ಹಂತ ಹಂತವಾಗಿ ಹೋರಾಟಗಳನ್ನು ನಡೆಸಲಾಗುವುದು ಎಂದರು.
ಬಿಜೆಪಿ ಕೋರ್ ಕಮಿಟಿ ಸದಸ್ಯರು ಅಂದು ಬಳ್ಳಾರಿಗೆ ಆಗಮಿಸಲಿದ್ದಾರೆ. ಪ್ರತಿಭಟನೆ ಬಳಿಕ ದೆಹಲಿಗೆ ತೆರಳಿ ಪಾದಯಾತ್ರೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಭೆಯ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬಳಿಕ ಕೆಲ ಪ್ರಮುಖ ನಾಯಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ ಎಂದರು.
ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದು, ಬಹುತೇಕ ಅವರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಪಹ್ಲಾದ್ ಜೋಶಿ, ಸಂಸದರಾದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಹಾಜರಾಗಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ನಾಯ್ಡು ಮೋಕಾ, ಬುಡಾ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್, ಬಿಜೆಪಿ ಮುಖಂಡರಾದ ಅಡವಿ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.


