ಬೆಂಗಳೂರು, ನವೆಂಬರ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದ್ದು, ಹನ್ನೊಂದು ಜನರ ಸಾವಿಗೆ ನೇರ ಹೊಣೆ ತನಿಖೆ ವೇಳೆ RCB, DNA, KSCA ವಿರುದ್ಧ ಹಲವು ಸಾಕ್ಷ್ಯಗಳು ಪತ್ತೆಯಾಗಿದೆ ಎನ್ನಲಾಗಿದೆ.
ಚಾರ್ಜ್ ಶೀಟ್ ಸಲ್ಲಿಕೆಗೆ ಹೈಕೋರ್ಟ್ನಿಂದ ಗ್ರೀನ್ ಸಿಗ್ನಲ್ ಹಿನ್ನೆಲೆ ತನಿಖೆ ಮುಗಿಸಿ ಸಿಐಡಿ ಚಾರ್ಜ್ ಶೀಟ್ ಸಿದ್ಧಪಡಿಸಿದೆ. ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಿಸಲಾಗಿದ್ದು, RCB ಜೊತೆ KSCA, DNA ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ. ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜನೆ, ಕಾರ್ಯಕ್ರಮ ಆಯೋಜನೆಗೂ ಮುನ್ನ ಸಭೆ ಸರಿಯಾಗಿ ಮಾಡದಿರುವುದು ಸೇರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ತನಿಖೆ ವೇಳೆ ಗೊತ್ತಾಗಿದೆ.


