ಬೆಂಗಳೂರು, ನವೆಂಬರ್ 09: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದೆ.
ಈ ಸಂಬಂಧ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಆಯೋಗ ಶಿಫಾರಸು ಮಾಡಿದೆ.
ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ.
ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಲ್ಲಿದೆ.