ಜುಲೈನಿಂದ ಗ್ರಾಮ ಪಂಚಾಯಿತಿಯಲ್ಲಿಯೇ ಜನನ, ಮರಣ ನೋಂದಣಿ

Ravi Talawar
ಜುಲೈನಿಂದ ಗ್ರಾಮ ಪಂಚಾಯಿತಿಯಲ್ಲಿಯೇ ಜನನ, ಮರಣ ನೋಂದಣಿ
WhatsApp Group Join Now
Telegram Group Join Now
ಬಳ್ಳಾರಿ,ಜೂ.29  ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿಯೇ ಜುಲೈ ಮಾಹೆಯಿಂದ ಜನನ ಮತ್ತು ಮರಣ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಅವರು ನೋಂದಣಿ ಮಾಡುತ್ತಾರೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರ ಬದಲಾಗಿ “ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಉಪನೋಂದಣಾಧಿಕಾರಿಯನ್ನಾಗಿ ನೇಮಿಸಿ ತಿದ್ದುಪಡಿಗೊಳಿಸಿಲಾಗಿದೆ.
ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ  ಇವರನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article