ಆಲಗೂರ ಗ್ರಾಮಕ್ಕೆ ರಸ್ತೆ ಅಭಿವೃದ್ಧಿಗೆ ₹1.15 ಕೋಟಿ ಅನುದಾನ ಬಿಡುಗಡೆ

Pratibha Boi
ಆಲಗೂರ ಗ್ರಾಮಕ್ಕೆ ರಸ್ತೆ ಅಭಿವೃದ್ಧಿಗೆ ₹1.15 ಕೋಟಿ ಅನುದಾನ ಬಿಡುಗಡೆ
WhatsApp Group Join Now
Telegram Group Join Now
ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದಲ್ಲಿ ನಡೆಯಲಿರುವ ಪಂಚಕಲ್ಯಾಣ ಮಹೋತ್ಸವದ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು ₹1.15 ಕೋಟಿ ಅನುದಾನ ಮಂಜೂರು ಮಾಡಲಾಗಿದೆ.
ಗ್ರಾಮಸ್ಥರ ಬಹುಕಾಲದ ಬೇಡಿಕೆಯನ್ನು ಮನಗಂಡು, ಮಾಜಿ ಶಾಸಕರಾದ ಶ್ರೀ ಆನಂದ್ ನ್ಯಾಮಗೌಡ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರಿಗೆ ವಿಶೇಷ ಮನವಿ ಸಲ್ಲಿಸಿದ್ದರು.
ಈ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ರಸ್ತೆ ಅಭಿವೃದ್ಧಿ ಕಾರ್ಯಕ್ಕಾಗಿ ಅನುದಾನ ಬಿಡುಗಡೆ ಮಾಡಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಈ ಸಂಬಂಧ ಗ್ರಾಮಸ್ಥರು ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಪ್ರಯತ್ನಿಸಿದ ಮಾಜಿ ಶಾಸಕರಾದ ಶ್ರೀ ಆನಂದ್ ನ್ಯಾಮಗೌಡ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ
WhatsApp Group Join Now
Telegram Group Join Now
Share This Article