ಬೆಂಗಳೂರು ವಿವಿಗೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ

Ravi Talawar
ಬೆಂಗಳೂರು ವಿವಿಗೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 7: ಜ್ಞಾನಭಾರತಿ ಕ್ಯಾಂಪಸ್​ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದೆ. ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್  ಅವರ ಹೆಸರನ್ನು ಬೆಂಗಳೂರು ವಿವಿಗೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿವಿ ಹೆಸರು ಬದಲಾವಣೆ, ಬಜೆಟ್​ನ ಅನಿರೀಕ್ಷಿತ ಘೋಷಣೆಗಳಲ್ಲಿ ಒಂದು. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.

WhatsApp Group Join Now
Telegram Group Join Now
Share This Article