ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಿದರೆ ಅವರ ಜಮೀನುಗಳಿಗೆ ಬೆಲೆ ಏರಬಹುದು: ಡಿಕೆಶಿ ವಿರುದ್ಧ ಹೆಚ್‌ಡಿಕೆ ಟಾಂಗ್‌

Ravi Talawar
ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಿದರೆ ಅವರ ಜಮೀನುಗಳಿಗೆ ಬೆಲೆ ಏರಬಹುದು: ಡಿಕೆಶಿ ವಿರುದ್ಧ ಹೆಚ್‌ಡಿಕೆ ಟಾಂಗ್‌
WhatsApp Group Join Now
Telegram Group Join Now

ನವದೆಹಲಿ, ಮೇ 23: ಅವರ ಜಮೀನುಗಳಿಗೆ ಬೆಲೆ ಏರಬಹುದು, ಇದಕ್ಕಾಗಿ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿರಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ಅವರನ್ನುದ್ದೇಶಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ಟೀಕೆ ಮಾಡಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಗಿತ್ತು. ಇದೀಗ ಅವರ (ಡಿಕೆಶಿ) ಜಮೀನುಗಳಿಗೆ ಬೆಲೆ ಏರಿಸಿಕೊಳ್ಳಲು ಹಾಗೆ ಮಾಡಿರಬಹುದು. ಈ ರಾಜಕರಣಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಂದ್ರ ಗೃಹ ಸಚಿವರಿಗೆ ಕಳುಹಿಸಿದ್ದು, ಅವರ ಬಳಿ ಪ್ರಸ್ತಾಪ ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ನನ್ನ ಮೇಲೆ ಗದಾಪ್ರಹಾರ ಮಾಡ್ತಿದ್ದರಲ್ಲಾ, ಇವರು ಮಾಡಿಕೊಂಡದ್ದರಲ್ಲಿ ಶೇ 50 ಸರ್ಕಾರಿ ಜಮೀನುಗಳಿವೆ. ಇವರು ಮಾಡಿರುವುದು ನಮಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

WhatsApp Group Join Now
Telegram Group Join Now
Share This Article