ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು.
ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.
ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್, ತೇಜಸ್ವಿನಿ ಅನಂತಕುಮಾರ್, ರಮೇಶ್ ಅರವಿಂದ್, ವಿನಯ್ ರಾಜಕುಮಾರ್, ನಿರೂಪಕಿ ಶ್ವೇತಾ ಚೆಂಗಪ್ಪ, ಬ್ರಹ್ಮಾಂಡ ಗೂರೂಜಿ ನರೇಂದ್ರ ಬಾಬು ಶರ್ಮಾ, ಇಂದ್ರಜಿತ್ ಲಂಕೇಶ್, ಮಂಡ್ಯ ರಮೇಶ್, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.
ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು.