ರೇಣುಕಾಸ್ವಾಮಿ ಕೊಲೆ ಕೇಸ್​: ಪವಿತ್ರಾಗೌಡಗೆ ಹಿನ್ನೆಡೆ

Ravi Talawar
ರೇಣುಕಾಸ್ವಾಮಿ ಕೊಲೆ ಕೇಸ್​: ಪವಿತ್ರಾಗೌಡಗೆ ಹಿನ್ನೆಡೆ
WhatsApp Group Join Now
Telegram Group Join Now

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಅವರು ಮತ್ತೆ ಜೈಲು ಸೇರಿದ್ದಾರೆ. ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ ಮನವಿ ಮಾಡಿದ್ದರು. ಆದರೆ, ಇದನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಅರ್ಜಿ ವಜಾ ಮಾಡಿದೆ.

‘ನಾವು ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಆ ಬಳಿಕವೇ ಆದೇಶ ನೀಡಿದ್ದೆವೆ. ಮತ್ತೋಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ ಅವರಿಗೆ ದೊಡ್ಡ ಹಿನ್ನಡೆ ಆಗಿದೆ. ಹೀಗಾಗಿ, ಮತ್ತೊಂದು ಬಾಗಿಲು ಕೂಡ ಮುಚ್ಚಿದೆ.

WhatsApp Group Join Now
Telegram Group Join Now
Share This Article