ಬಳ್ಳಾರಿ 01: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಪರಿಶಿಷ್ಟ ಪಂಗಡ ವಿಭಾಗ ಬೆಂಗಳೂರು ಕೆಪಿಸಿಸಿ ಭಾರತ್ ಜೋಡೋ ಕಚೇರಿಯಲ್ಲಿ ಇಂದು ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷರಾದ ವಿಜಯಕುಮಾರ್ ನಾಯಕ ರವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರುಗಳು ಹಾಗೂ ರಾಜ್ಯ ಉಪಾಧ್ಯಕ್ಷರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಪೂರ್ವಭಾವಿ ಸಭೆ ಜರುಗಿತು.
ಈ ಸಭೆಗೆ ಬಳ್ಳಾರಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಅಧ್ಯಕ್ಷರಾದ ಎರಡು ಗೋಪಾಲ್ ಭಾಗವಹಿಸಿದ್ದರು. ಪರಿಶಿಷ್ಟ ಪಂಗಡದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು, ಏಳು ಜನ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮತ್ತು ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಈ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಈ ಸಭೆಯಲ್ಲಿ ಕೆಪಿಸಿಸಿ ಕಾನೂನು ಸಲಹೆಗಾರದ ದಿವಾಕರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್ ಸತ್ಯನಾರಾಯಣ ಬಳ್ಳಾರಿ ಜಿಲ್ಲಾ ಎಸ್ ಟಿ ವಿಭಾಗದ ಅಧ್ಯಕ್ಷರಾದ ಎನ್ ಎರಗುಡಿ ಗೋಪಾಲ ಹಾಗೂ ಬಳ್ಳಾರಿ ತಾಲೂಕ ಅಧ್ಯಕ್ಷರಾದ ಎಂ ಗೋವಿಂದಪ್ಪ ಹಾಗೂ ಇನ್ನುಳಿದ ಪದಾಧಿಕಾರಿಗಳು ಭಾಗವಹಿಸಿದ್ದರು.