ಬೆಂಗಳೂರು: ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಮತ್ತೆ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ಈ ಸಂಬಂಧ ಪ್ರತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಕೃಷ್ಣ ಬೈರೇಗೌಡ, ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ ಇನ್ನೂ 4 ಶವಗಳನ್ನು ಪತ್ತೆ ಮಾಡಲಾಗಿದ್ದು, ಉತ್ತರಕಾಶಿಗೆ ವಿಮಾನದಲ್ಲಿ ರವಾನಿಸಲಾಗಿದೆ.
ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ ಇಂದು ಪತ್ತೆಯಾದ ಮೃತ ದುರ್ದೈವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲ 9 ಮೃತದೇಹಗಳನ್ನು ವಿಮಾನದ ಮೂಲಕ ಡೆಹ್ರಾಡೂನ್ಗೆ ತರಲಾಗುವುದು. ಡೆಹ್ರಾಡೂನ್ನಲ್ಲಿ ಎಂಬಾಮಿಂಗ್ ಮಾಡಲಾಗಿದೆ. ಎಲ್ಲ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಈಗಾಗಲೇ ಚಾರ್ಟರ್ ಫ್ಲೈಟ್ ವ್ಯವಸ್ಥೆ ಮಾಡಿದ್ದೇವೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯವರ ಭೇಟಿ ಮಾಡಲಾಗಿದ್ದು, ಮುಖ್ಯ ಕಾರ್ಯದರ್ಶಿಯವರೊಂದಿಗಿನ ಸಭೆಯಲ್ಲಿ ಮೃತದೇಹಗಳ ಸಾಗಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಇಂದೇ ಮೃತ ದೇಹಗಳ ರವಾನೆ ಮಾಡಲಾವುದು ಎಂದು ತಿಳಿಸಿದ್ದಾರೆ.