ಇಸ್ಲಾಮಾಬಾದ್, ಮೇ 02: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಭಯೋತ್ಪಾದಕರ ಈ ಕೃತ್ಯದ ನಂತರ ಜನರ ರಕ್ತ ಕುದಿಯುತ್ತಿದೆ. ಮತ್ತೊಂದೆಡೆ, ಸಾಮಾಜಿಕ ಮಾಧ್ಯಮಗಳಲ್ಲಿ ಎರಡೂ ದೇಶಗಳ ನಡುವೆ ವಿಭಿನ್ನ ರೀತಿಯ ಯುದ್ಧ ನಡೆಯುತ್ತಿದ್ದು, ಇದು ಎರಡೂ ದೇಶಗಳ ಮನರಂಜನಾ ಪ್ರಪಂಚದ ಮೇಲೆ ಪರಿಣಾಮ ಬೀರುತ್ತಿದೆ.
ಹಾಗೆಯೇ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ಗಳನ್ನು ಕೂಡ ಭಾರತದಲ್ಲಿ ನಿಷೇಧಿಸಲಾಗಿದೆ. ಏತನ್ಮಧ್ಯೆ, ಪಾಕಿಸ್ತಾನ ಕೂಡ ಭಾರತೀಯ ಹಾಡುಗಳ ಪ್ರಸಾರವನ್ನು ನಿಷೇಧಿಸಿದೆ. ಪಾಕಿಸ್ತಾನಿ ಪ್ರಸಾರಕರ ಸಂಘ ಅಂದರೆ ಪಿಬಿಎ ಪಾಕಿಸ್ತಾನಿ ಎಫ್‌ಎಂ ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳ ಪ್ರಸಾರವನ್ನು ನಿಲ್ಲಿಸಲು ನಿರ್ಧರಿಸಿದೆ.