ರಾಜ್ಯದ 21,೦೦೦ ಸರ್ಕಾರಿ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿವೆ: ಎಐಡಿಎಸ್‌ಓ

Ravi Talawar
ರಾಜ್ಯದ 21,೦೦೦ ಸರ್ಕಾರಿ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿವೆ: ಎಐಡಿಎಸ್‌ಓ
WhatsApp Group Join Now
Telegram Group Join Now
ಬಳ್ಳಾರಿ,ಮೇ.24: ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಬೇಕೆಂದು ಇಂದು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಬಳ್ಳಾರಿ ರೈಲು ನಿಲ್ದಾಣ ಮುಂದೆ ಸಾರ್ವಜನಿಕರಿಂದ ಸಹಿ ಸಂಗ್ರಹಣ ಅಭಿಯಾನ ಮಾಡಲಾಯಿತು.ಈ ಸಂದರ್ಭದಲ್ಲಿ ಎಐಡಿಎಸ್‌ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, ರಾಜ್ಯದಲ್ಲಿ ಒಟ್ಟು ೪೬,೭೫೫ ಸರ್ಕಾರಿ ಶಾಲೆಗಳು ಇವೆ, ಅದರಲ್ಲಿ ೨೧,೨೫೫ ಶಾಲೆಗಳು ಕಟ್ಟಡಗಳು ಶಿಥಿಲಗೊಂಡು ಅಪಾಯದಲ್ಲಿವೆ, ಇದರಲ್ಲಿ ಬಳ್ಳಾರಿಯ ೧೭೧ ಶಾಲೆಗಳು ಇದೆ. ಹಲವು ವರ್ಷಗಳಿಂದ ದುರಸ್ತಿ ಕಾಣದ ಶಾಲೆಗಳ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿರುವುದು, ಪ್ರಾಣ ಕಳೆದುಕೊಂಡಿರುವುದAತೂ ಹೃದಯವಿದ್ರಾವಕ, ಬಳ್ಳಾರಿ ತಾಲೂಕಿನ ಶಂಕರ ಬಂಡೆ ಗ್ರಾಮದ ಓರ್ವ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಚಾವಣಿ ಕುಸಿದು ಗಾಯಗೊಂಡು ನಂತರ ಸಾವಿಗೀಡಾಗಿದ್ದು ಅತ್ಯಂತ ನೋವಿನ ಘಟನೆಯಲ್ಲೊಂದು. ಈ ಘಟನೆ ರಾಜ್ಯದಲ್ಲಿನ ಶಾಲೆಗಳ ಶೋಚನೀಯ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳು “ಬಡಮಕ್ಕಳ ಶಿಕ್ಷಣದ ಆಶಾಕಿರಣ”,  ಕೋಟ್ಯಂತರ  “ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯ!!” ಈ ಶಾಲೆಗಳಿಗೆ ಶಿಕ್ಷಣದ ಕನಸು ಹೊತ್ತು ಬರುವವರು ಬಹುತೇಕ ಬಡವರ, ರೈತ -ಕಾರ್ಮಿಕರ ಮಕ್ಕಳು. ಅಂತಹ ನಮ್ಮ ಸರ್ಕಾರಿ ಶಾಲೆಗಳ ಇಂದಿನ ಪರಿಸ್ಥಿತಿ ಬಹಳ ಶೋಚನೀಯ ಹಾಗೂ ಚಿಂತಾಜನಕವಾಗಿದೆ.ಸರ್ಕಾರಗಳು ಮೂಲಭೂತ ಸೌಕರ್ಯಗಳನ್ನು ಒದಗಿಸದೆ, ಕಟ್ಟಡಗಳನ್ನು ದುರಸ್ತಿ ಮಾಡದೆ, ಶಿಕ್ಷಕರ ನೇಮಕಾತಿ ಮಾಡದೆ ,ದಾಖಲಾತಿ ಕಡಿಮೆ ಎಂಬ ನೆಪವೊಡ್ಡಿ  ೬,೦೦೦ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ.
ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿಲ್ಲ  ಎಂಬ ಮಾತನ್ನು ಹೇಳಿ, ಖಾಸಗಿ ಶಾಲೆಗಳಿಗೆ ಪರವಾನಾಗಿ ಕೊಟ್ಟು, ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡುವ ಜವಾಬ್ದಾರಿಯಿಂದ ನುಣುಚಿ ಕೊಳ್ಳುತ್ತಿರುವುದನ್ನು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ.ಇದೆ ತಿಂಗಳು ೨೯ರಂದು ಶಾಲೆಗಳು ಶುರುವಾಗಲಿದೆ, ಈ ಬಾರಿ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಶಿಕ್ಷಣ ಸಚಿವರು ಈ ಕೂಡಲೇ ಕಾರ್ಯ ಪ್ರವೃತ್ತರಾಗಿ ಶಿಥಿಲಗೂಂಡಿರುವ ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ತ್ವರಿತವಾಗಿ ದುರಸ್ತಿ ಮಾಡಿಸಬೇಕು ಮತ್ತು ಅಗತ್ಯ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಕೆ.ಈರಣ್ಣ, ಉಪಾಧ್ಯಕ್ಷರಾದ ಎಂ.ಶಾAತಿ, ಉಮಾ ಕಛೇರಿ ಕಾರ್ಯದರ್ಶಿ ನಿಹಾರಿಕ, ಸಾರ್ವಜನಿಕರು ಮುಂತಾದವರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article