ಗದಗಅಗಷ್ಟ13: ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಲಾದ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ಆದ್ಯತೆಯನುಸಾರ ಸರ್ಕಾರಿ ಶಾಲಾಭಿವೃದ್ಧಿ ಕಾಮಗಾರಿಗಳಾದ ಶಾಲಾ ಶೌಚಾಲಯ, ಶಾಲಾ ಕಾಂಪೌಂಡ, ಶಾಲಾ ಅಡುಗೆ ಕೋಣೆ ಹಾಗೂ ಶಾಲಾ ಆಟದ ಮೈದಾನಂತಹ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಹರಡುತ್ತಿರುವ ಡೆಂಗ್ಯೂ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡುವುದು ಹಾಗೂ ಗ್ರಾಮ ಮಟ್ಟದಲ್ಲಿ ಕೈಗೋಳ್ಳಬೇಕಿರುವ ಮುನ್ನೆಚ್ಛರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು
ಜಿಲ್ಲೆಯಲ್ಲಿ ತೆರಿಗೆ ಸಂಗ್ರಹಣೆಯು ಕಡಿಮೆಯಾಗದಂತೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಸ್ವ-ಸಹಾಯ ಸಂಘದ ಸದಸ್ಯರಿಂದ ವಸೂಲು ಮಾಡಿಸುವ ಬಗ್ಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮನೆ ಮನೆ ಸರ್ವೆ ಮಾಡಿ ಕೂಡಲೇ ಪ್ರಗತಿ ಸಾಧಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲದಡಿ ಸ್ವಿಕೃತವಾದ ಎಲ್ಲಾ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಬೇಕು ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿಗಳ ಹಾಜರಾತಿಯನುಸಾರ ವೇತನ ಪಾವತಿಗೆ ಮುಂದಾಗಬೇಕಿದ್ದು ಕಡ್ಡಾಯವಾಗಿ ಕಛೇರಿಗೆ ತೆರಳಿ ಸಾರ್ವಜನಿಕರಿಗೆ ಲಭ್ಯವಿರುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸ್ವಚ್ಛ ಭಾರತ್ ಮಿಷನ್ ಪಂಚತಂತ್ರ- 2 ನಲ್ಲಿ ಆರೋಹಣ ವೈಯಕ್ತಿಕ ಫಲಾನುಭವಿಗಳಿಗೆ ನೀಡಿದ ಕಾರ್ಯಾದೇಶ, ಬಿಲ್ ಪಾವತಿ ಹಾಗೂ ಕಾಮಗಾರಿ ಜಿಯೋ ಟ್ಯಾಗ್ ಕುರಿತು ಪಂಚತಂತ್ರ-2 ನಲ್ಲಿ ಮಾಹಿತಿ ಆರೋಹಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕ್ರಮವಹಿಸುವುದು.
ಗ್ರಾಮ ಪಂಚಾಯತಿಗಳಲ್ಲಿ ಮನೆ-ಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಪ್ರಕ್ರಿಯೆ ಪರಿಣಾಮಕಾರಿಯಾಗಿ ಚಾಲ್ತಿ ಆಗಬೇಕು. ಘನತ್ಯಾಜ್ಯ ವಿಲೇವಾರಿ ಸರಿಯಾಗಿ ಆಗುವಂತೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು,
ಮತ್ತು ಜಿಲ್ಲೆಯಲ್ಲಿ ಈಗಾಗಲೇ 51 ಸಮುದಾಯ ಶೌಚಾಲಯಗಳನ್ನು ಅನುಷ್ಠಾನಿಸಲು ಅನುಮೋದನೆ ನೀಡಲಾಗಿದ್ದು ಸದರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಕಳೇದೆರಡು ವರ್ಷಗಳಿಂದ ಮುಕ್ತಾಯಗೊಳಿಸದೇ ಬಾಕಿ ಉಳಿದಿರುವ ಕಾಮಗಾರಿ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದರ ಬಗ್ಗೆ ಹೆಚ್ಚಿನ ಗಮನಹರಿಸಲು ನಿರ್ದೇಶನ ನೀಡಿದರು.
ಸಾಮಾಜೀಕ ಲೆಕ್ಕ ಪರಿಶೋಧನೆ ಆಕ್ಷೇಪಣೆ & ವಸೂಲಾತಿ, ಒಂಬುಡ್ಸಮನ್ ವಸೂಲಾತಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸರಿಯಾಗಿ ಕ್ರಮವಹಿಸಬೇಕು ಮತ್ತು ಗ್ರಾಮ ಆರೋಗ್ಯ ಶಿಬಿರದ ಮಾಹಿತಿಯನ್ನು ಪಂಚತಂತ್ರ-2ನಲ್ಲಿ ಕಡ್ಡಾಯವಾಗಿ ಆರೋಹಿಸಲು ಹಾಗೂ ಪ್ರತಿ ಮಾಹೆ ಗ್ರಾಮ ಪಂಚಾಯತಿ ಟಾಸ್ಕ್ ಫೋರ್ಸ್ ಸಭೆ ಆಯೋಜನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿಗಳು ಸಿ ಆರ್ ಮುಂಡರಗಿ, ಯೋಜನಾ ನಿರ್ದೇಶಕ ಎಂ. ಬಿ. ಚಳಗೇರಿ , ಮುಖ್ಯ ಯೋಜನಾಧಿಕಾರಿ ನಿರ್ಮಲಾ ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು/ಸಿಬ್ಬಂದಿಗಳು/ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು/ ಜಿಲ್ಲಾ/ ತಾಲ್ಲೂಕು ಮಟ್ಟದ ಎಲ್ಲಾ ಯೋಜನೆಗಳ ಸಿಬ್ಬಂದಿಗಳು ಹಾಜರಿದ್ದರು.