ಮಾಸ್ಕೋ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಶುಕ್ರವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವಲ್ಲೇ ಇರಾನ್’ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ, ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಾಕ್ಕೆ ಎಚ್ಚರಿಕೆಯನ್ನೂ ನೀಡಿದೆ.
ಇಸ್ರೇಲ್-ಇರಾನ್ ಸಮರಕ್ಕೆ ಅಮೆರಿಕಾ ಪ್ರವೇಶ ಖಚಿತವಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಕೂಡ ಇದೀಗ ಎಂಟ್ರಿ ಕೊಡ್ಡಿದ್ದು, ಈ ಬೆಳವಣಿಗೆ ಮತ್ತೊಂದು ಸುತ್ತಿನ ಶೀತಲ ಸಮರಕ್ಕೆ ನಾಂದಿ ಹಾಡುವ ಆತಂತಕಕ್ಕೆ ಕಾರಣವಾಗಿದೆ.
ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮಾರಿಯಾ ಜಖರೋವಾ ಅವರ ಅವರ ಮಾತನಾಡಿ, ಇಸ್ರೇಲ್ ಪರವಾಗಿ ನೇರವಾಗಿ ಧುಮಕದಂತೆ ಅಮೆರಿಕಾಕಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಪರಿಸ್ಥಿತಿಯಲ್ಲಿ ಸೇನಾ ಹಸ್ತಕ್ಷೇಪ ಮಾಡದಂತೆ ವಾಷಿಂಗ್ಟನ್’ಗೆ ಎಚ್ಚರಿಸುತ್ತಿದ್ದೇವೆ. ಒಂದೊಮ್ಮೆ ಈ ಅಪಾಯಕಾರಿ ಹೆಜ್ಜೆ ಇಟ್ಟಿದ್ದೇ ಆದರೆ, ಅನಿರೀಕ್ಷಿತ ಕೆಟ್ಟ ಪರಿಣಾಮ ಎದುರಿಸುವುದು ಖಂಡಿತ ಎಂದು ಹೇಳಿದ್ದಾರೆ.
ನಾನು ಏನು ಮಾಡುತ್ತೇನೋ ಗೊತ್ತಿಲ್ಲ ಎಂದು ಇರಾನ್’ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ ರಷ್ಯಾ ಪ್ರತಿಕ್ರಿಯೆ ನೀಡಿದೆ.