ಬೆಂಗಳೂರು, ಅಕ್ಟೋಬರ್ 25: ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕ ಸಹಕಾರಿ ರತ್ನ ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದಲ್ಲವೇ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳು ಇರಲಿ. ಸಮಿತಿಯ ತೀರ್ಮಾನದಂತೆ ನೀಡಿ ಎನ್ನುವ ಸಲಹೆ ನೀಡಿದರು.


