ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಚಾರವಾಗಿ ಕೊಲಿಜಿಯಂನಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆಯೇ, ಸಂಪ್ರದಾಯದಂತೆ ಸಿಜೆಐ ಅವರು ತಮ್ಮ ನಂತರದ ಹಿರಿಯ ನ್ಯಾಯಮೂರ್ತಿಯ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.
ಸಿಜೆಐ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ನಂತರ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ. ಅವರು ಡಿಸೆಂಬರ್ 17, 2022 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅವರ ತಂದೆ YV ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ (CJI)ಯಾಗಿದ್ದು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸ್ಥಾನದಲ್ಲಿದ್ದರು.