ಸಂಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

MK HasiruKranti
ಸಂಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
WhatsApp Group Join Now
Telegram Group Join Now

 

ಗದಗ,ಎ,೦೩ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಸಂಯಮ ಪ್ರಶಸ್ತಿ” ಪ್ರದಾನ ಕಾರ್ಯಕ್ರಮ ಬೆಂಗಳೂರು ನಗರದ ಗಾಂಧಿ ಭವನದಲ್ಲಿರುವ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಿತು.

೨೦೨೩ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ೨೦೨೪ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್ ಹಾಗೂ ೨೦೨೫ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ.ವೂಡೇ ಪಿ.ಕೃಷ್ಣ ರವರಿಗೆ ನೀಡಿ ಗೌರವಿಸಲಾಯಿತು.

ಈ ಸಮಾರಂಭದಲ್ಲಿ, ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗರೆಡ್ಡಿ, ಕರ್ನಾಟಕ ಸರ್ಕಾರದ ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾದ ಬಿ.ಬಿ.ಕಾವೇರಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article