ಬೆಂಗಳೂರು. ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕ ಜೆ ಮಾರುತಿ ರಾವ್ ಅವರಿಗೆ ಹಿಂದೂಸ್ತಾನಿ ಸಂಗೀತದಲ್ಲಿ ಉನ್ನತ ಸಾಧನೆ ಪರಿಗಣಿಸಿ ದಾವಣಗೇರಿ ಜಿಲ್ಲೆಯ ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಇವರು ಕೊಡಮಾಡುವ ರಾಜ್ಯ ಮಟ್ಟದ “ಸರಸ್ವತಿ ಕನ್ನಡ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ, ಅಧ್ಯಕ್ಷರಾದ ಡಾ. ನಾಗೇಶ ಸಂಜೀವ ಕಿಣೆ, ಪ್ರಧಾನ ಕಾರ್ಯದರ್ಶಿ ಶ್ರೀಪತಿ ರಾಘವೇಂದ್ರ ಶೆಣೈ, ಸದಸ್ಯರು, ಜೆ ಮಾರುತಿ ರಾವ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.


