ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಅಂಬುಲೆನ್ಸ್‌ಗಳನ್ನು ನಿಯೋಜಿಸಬೇಕು. ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್‌ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಉಪಹಾರ ವ್ಯವಸ್ಥೆ ಕಲ್ಪಿಸಬೇಕು. ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು, ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.