‘ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಮುಸ್ಲಿಂ ರಾಷ್ಟ್ರ’ ಇತಿಹಾಸ ಸೃಷ್ಠಿಸಲು ಮುಂದಾದ ಸೌದಿ ಅರೇಬಿಯಾ! ಯಾರು ಈ ರೂಪವತಿ?

Ravi Talawar
‘ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಮುಸ್ಲಿಂ ರಾಷ್ಟ್ರ’ ಇತಿಹಾಸ ಸೃಷ್ಠಿಸಲು ಮುಂದಾದ ಸೌದಿ ಅರೇಬಿಯಾ! ಯಾರು ಈ ರೂಪವತಿ?
WhatsApp Group Join Now
Telegram Group Join Now

ಸೌದಿ ಅರೇಬಿಯಾ,ಮಾ27:  ಮೊಟ್ಟಮೊದಲ ಬಾರಿಗೆ ಪ್ರತಿಷ್ಠಿತ ವಿಶ್ವ ಸುಂದರಿ ಸ್ಪರ್ಧೆ  ಯಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲಾಗಲಿದೆ.

ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್ ಏಷ್ಯಾ ಮತ್ತು ಮಿಸ್ ಅರಬ್ ಪೀಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ್ದರು. ಇದಲ್ಲದೇ ಮಿಸ್ ಮಿಡಲ್ ಈಸ್ಟ್ (ಸೌದಿ ಅರೇಬಿಯಾ) ಮತ್ತು ಮಿಸ್ ಅರಬ್ ವರ್ಲ್ಡ್ ಪೀಸ್ 2021 ರಂತಹ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

27 ವರ್ಷದ ರೂಪದರ್ಶಿ ರೂಮಿ ಸೋಮವಾರ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​​ ಇಲ್ಲಿದೆ ನೋಡಿ. ಅರೇಬಿಕ್ ಸೇರಿದಂತೆ ಇಂಗ್ಲಿಷ್, ಫ್ರೆಂಚ್ ಮತ್ತು ಬಹು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅರಬ್​​​ ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article