ಎಸ್​ಸಿ, ಎಸ್​ಟಿ ಸ್ಕಾಲರ್​ಶಿಪ್ ಇನ್ನೂ ಬಿಡುಗಡೆ ಮಾಡದ ಹಂಪಿ ವಿವಿ

Ravi Talawar
ಎಸ್​ಸಿ, ಎಸ್​ಟಿ ಸ್ಕಾಲರ್​ಶಿಪ್ ಇನ್ನೂ ಬಿಡುಗಡೆ ಮಾಡದ ಹಂಪಿ ವಿವಿ
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್ 19: ಕರ್ನಾಟಕದ ಏಕೈಕ ಕನ್ನಡ ವಿಶ್ವವಿದ್ಯಾಲಯವಾಗಿರುವ ಹಂಪಿ ವಿವಿಗೆ ಆರ್ಥಿಕ ಮುಗ್ಗಟ್ಟಿನಿಂದಾಗಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಸಿ/ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡುವುದು ಈವರೆಗೆ ಸಾಧ್ಯವಾಗಿಲ್ಲ. ಒಟ್ಟಾರೆಯಾಗಿ, 130 ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದು, ಸ್ಕಾಲರ್​ಶಿಪ್​ಗಾಗಿ ಆಡಳಿತ ವಿಭಾಗದ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದ್ದರೂ ಅವರ ವಿದ್ಯಾರ್ಥಿವೇತನ ಬಿಡುಗಡೆಯಾಗಿಲ್ಲ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
Share This Article