ಬಳ್ಳಾರಿ,ಮೇ 19 ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಶಾಸಕರು, ಹಲವು ಸಂಘ-ಸAಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನಲೆಯಲ್ಲಿ ಸಮೀಕ್ಷಾ ಕಾರ್ಯದ ಅವಧಿಯನ್ನು ಈ ಕೆಳಕಂಡAತೆ ವಿಸ್ತರಿಸಲಾಗಿದೆ.
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ಮೇ 25 ರವರೆಗೆ ವಿಸ್ತರಣೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಮೇ 26 ರಿಂದ 28 ರವರೆಗೆ 3 ದಿನಗಳ ಕಾಲ. ಆನ್‌ಲೈನ್ ಮೂಲಕ ಮೇ 19 ರಿಂದ 28 ರವರೆಗೆ ಸ್ವಯಂ ಘೋಷಣೆಗೆ ಕಾಲ ನಿಗದಿಪಡಿಸಲಾಗಿದೆ.
ಮೇ 26 ರಿಂದ 28 ರವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.