ಐತಿಹಾಸಿಕ ಕಡಲೆಕಾಯಿ ಪರಿಷೆ: ನ. 25,26 ರಂದು ನಿಗದಿ

Ravi Talawar
ಐತಿಹಾಸಿಕ ಕಡಲೆಕಾಯಿ ಪರಿಷೆ: ನ. 25,26 ರಂದು ನಿಗದಿ
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್​ 14: ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷ ದಿನಾಂಕವನ್ನು ಮುಜರಾಯಿ ಇಲಾಖೆ ಘೋಷಣೆ ಮಾಡಿದೆ.

ಬಸವನಗುಡಿ ಕಡಲೆಕಾಯಿ ಪರಿಷೆಯು ಪ್ರತಿವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುತ್ತದೆ. ಈ ಬಾರಿ ಮುಜರಾಯಿ ಇಲಾಖೆ ನವೆಂಬರ್​ 25 ಮತ್ತು 26ರಂದು ಎರಡು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಧಾರ್ಮಿಕ ದತ್ತಿ ಪರಿಷತ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಲದೇ, ಎರಡು ದಿನಗಳ ಕಾಲ ನಡೆಯಲಿರುವ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್​ ಹಾಕಲು ನಿರ್ಧರಿಸಲಾಗಿದೆ.

ಸುಂಕ ರಹಿತ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೇ, ಈ ಬಾರಿ ಯಾವುದೇ ರೀತಿಯ ಟೆಂಡರ್ ಪಕ್ರಿಯೆ ಕೂಡ ಇರುವುದಿಲ್ಲ ಎಂದು ಸಚಿವರು ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Share This Article