ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕ(Terrorist)ರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದಷ್ಟೇ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಾದ ಬಳಿಕ ಉಗ್ರರ ಶೋಧ ಕಾರ್ಯಾಚರಣೆ ಚುರುಕುಗೊಂಡಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ದಾಳಿಕೋರರನ್ನು ಬಂಧಿಸಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಗುಂಡಿನ ಚಕಮಕಿ ನಡೆದಿದೆ.