ಅಕ್ರಮ ಪಡಿತರ ಅಕ್ಕಿ ದಾಸ್ತಾನು ವಶ

Ravi Talawar
ಅಕ್ರಮ ಪಡಿತರ ಅಕ್ಕಿ ದಾಸ್ತಾನು ವಶ
WhatsApp Group Join Now
Telegram Group Join Now

ಬಳ್ಳಾರಿ,ಮೇ 16ನಗರದ ಹೊರವಲಯದಲ್ಲಿನ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115 ರ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.

ವಶಪಡಿಸಿಕೊಳ್ಳಲಾದ ಪಡಿತರ ಅಕ್ಕಿಯನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು, ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಆಹಾರ ಇಲಾಖೆಯ ಆಹಾರ ನಿರೀಕ್ಷಕರು, ಸಿಬ್ಬಂದಿ  ಒಟ್ಟುಗೂಡಿ ಈ ಕಾರ್ಯಾಚರಣೆ ಮಾಡಲಾಗಿದ್ದು, ಅಕ್ರಮ ಪಡಿತರ ಅಕ್ಕಿಯನ್ನು ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಬಳ್ಳಾರಿ ನಗರದ ಎಪಿಎಂಸಿ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಹಾಗೂ ಆಹಾರ ಇಲಾಖೆ ಉಪನಿರ್ದೇಶಕಿ ಸಕೀನಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬಡ ಜನರಿಗೆ ತಲುಪಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವವರಿಗೆ ಇದು ಆಹಾರ ಇಲಾಖೆಯ ಈ ಕ್ರಮ ಎಚ್ಚರಿಕೆಯ ಸಂದೇಶವಾಗಿದೆ.

WhatsApp Group Join Now
Telegram Group Join Now
Share This Article