ಬಳ್ಳಾರಿ, ಮಾ.13.: ಮಹಿಳೆಯರಿಗೆ ಯಾವುದೇ ಪದವಿ ಇಲ್ಲದೆ ಸಿಗುವ ಪ್ರಮಾಣ ಪತ್ರ ಎಂದರೆ ಅದು ಟೈಲರಿಂಗ್ ತರಬೇತಿ ಪ್ರಮಾಣ ಪತ್ರ ಇದರಿಂದ ತಮ್ಮ ಜೀವನವನ್ನು ಸ್ವಾವಲಂಬಿಯಾಗಿ ರೂಪಿಸಿಕೊಳ್ಳಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಂಪಿರಮಣ ತಿಳಿಸಿದರು.
ಅವರು ಇಂದು ನಗರದ ಸಿಂಧಿಗಿ ಕಾಂಪೌಂಡ್ನಲ್ಲಿ ಪ್ರತಿಭಾ ಮಹಿಳಾ ಮಂಡಳಿ (ರಿ) ವತಿಯಿಂದ ಆಯೋಜಿಸಿದ್ದ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ,
ಕಾರ್ಯಕ್ರಮದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಲು ಇಂತಹ ತರಬೇತಿ ಕಾರ್ಯಕ್ರಮಗಳು ಬಹಳ ಉಪಯುಕ್ತವಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಪ್ರತಿಭಾ ಮಹಿಳಾ ಮಂಡಳಿ ಅಧ್ಯಕ್ಷೆ ಸುಜಾತ ರವಿಚಂದ್ರ ಮಾತನಾಡಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಂಘಟನೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಕೀಲರಾದ ಸಾಧನ ಹಿರೇಮಠ, ವಿಶೇಷ ಅತಿಥಿಗಳಾಗಿ ವಕೀಲರಾದ ವಿಜಯಲಕ್ಷ್ಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಗುಣ, ಪುಷ್ಪ ಭಾಗವಹಿಸಿ ಮಹಿಳೆಯರಿಗೆ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಅನೇಕ ಮಹಿಳೆಯರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.


