ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು!

Ravi Talawar
ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ  ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು!
WhatsApp Group Join Now
Telegram Group Join Now

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕಳೆದು ತಿಂಗಳು ಜೂನ್​ 26ರಂದು ಆರೋಗ್ಯ ಹದಗೆಟ್ಟ ಹಿನ್ನೆಲೆ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಇದೀಗ 15 ದಿನಗಳಲ್ಲಿ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.

ಬಿಜೆಪಿ ಭೀಷ್ಮ ಎಂದೇ ಗುರತಿಸಿಕೊಂಡಿರುವ ಅಡ್ವಾಣಿಯವರಿಗೆ ಈ ವರ್ಷ ಮಾರ್ಚ್​ ತಿಂಗಳಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿತ್ತು. ಆರೋಗ್ಯದ ಕಾರಣದಿಂದ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದಿದ್ದರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಸ್ವತಃ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಶಸ್ತಿ ನೀಡಿ ಗೌರವಿಸಿದ್ದರು.

ಇದಕ್ಕೂ ಮುನ್ನ 2015ರಲ್ಲಿ ಅಡ್ವಾಣಿ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು. ಅಡ್ವಾಣಿ ಅವರು 2002 ರಿಂದ 2004ರ ವರೆಗೆ ಭಾರತದ 7ನೇ ಉಪ ಪ್ರಧಾನ ಮಂತ್ರಿಯಾಗಿದ್ದರು. ಜತೆಗೆ 1998 ರಿಂದ 2004ರ ವರೆಗೆ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಬಿಜೆಪಿ ಸಹ-ಸಂಸ್ಥಾಪಕರಲ್ಲಿಯೂ ಒಬ್ಬರಾಗಿದ್ದು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸದಸ್ಯರಾಗಿದ್ದಾರೆ.
WhatsApp Group Join Now
Telegram Group Join Now
Share This Article