ತಂಬಾಕು ಮುಕ್ತ ಸಮಾಜ ನಿರ್ಮಾಣದ ಗುರಿ: ಹಿರಿಯ ಸಿವಿಲ್ ನ್ಯಾಯಾಧಿಶ ಪಿ.ಎಫ್ ದೊಡ್ಡಮನಿ

Ravi Talawar
ತಂಬಾಕು ಮುಕ್ತ ಸಮಾಜ ನಿರ್ಮಾಣದ ಗುರಿ: ಹಿರಿಯ ಸಿವಿಲ್ ನ್ಯಾಯಾಧಿಶ ಪಿ.ಎಫ್ ದೊಡ್ಡಮನಿ
WhatsApp Group Join Now
Telegram Group Join Now
 *ಧಾರವಾಡಮೇ.31: ವಿಶ್ವ ಆರೋಗ್ಯ ಸಂಸ್ಥೆಯು  ಪ್ರಪಂಚದಾದ್ಯಂತ  ಮೇ 31 ರಂದು ವಿಶ್ವ ತಂಬಾಕು ದಿನಾಚರಣೆಯನ್ನು ಹಮ್ಮಿಕೊಂಡಿದೆ. ಕಾರಣ ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಪ್ರತಿ ವರ್ಷ ಒಂದೊಂದು ಘೋಷವಾಕ್ಯದ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತಿದೆ ಎಂದು ಹಿರಿಯ ನ್ಯಾಯಾಧೀಶ ಪರಶುರಾಮ.ಎಫ್.ದೊಡ್ಡಮನಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ರಾಷ್ಟ್ರಿಯ ಸೇವಾ ಯೋಜನಾ ಘಟಕ, ಕರ್ನಾಟಕ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕರ್ನಾಟಕ ಕಾಲೇಜು ಇವರ ಸಹಭಾಗಿತ್ವದಲ್ಲಿ ಇಂದು ಬೆಳಿಗ್ಗೆ ಕೆಸಿಡಿ ಮಹಾವಿದ್ಯಾಲಯದ ಬಿಬಿಎ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ಕಾರ್ಯಕ್ರಮವನ್ನು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ.ಎಫ್.ದೊಡ್ಡಮನಿ ಅವರು  ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 ಬೀಡಿ, ಸಿಗರೇಟು, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳ ಬಳಕೆಯಿಂದ ವ್ಯಕ್ತಿಯು ಬಲಿಯಾಗುತ್ತಿದ್ದಾನೆ. ಸಾಮಾನ್ಯವಾಗಿ ಹಳ್ಳಿಪ್ರದೇಶಗಳಲ್ಲಿ ಪೆÇೀಷಕರು ಮಕ್ಕಳಿಗೆ ಹಣ ಕೊಟ್ಟು ತಂಬಾಕು ಉತ್ಪನ್ನಗಳಂತಹ ವಸ್ತುಗಳನ್ನು ತೆಗೆದುಕೊಂಡು ಬರೋದಕ್ಕೆ ಅಂಗಡಿಗಳಿಗೆ ಕಳಿಸುತ್ತಾರೆ. ಇದರಿಂದ ಮಕ್ಕಳು ಸಹ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯಲ್ಲಿ ಇಂತಹ ಕೆಟ್ಟ ಚಟಗಳನ್ನು ಮಾಡಲು ಪ್ರಯತ್ನಿಸುತ್ತಾರೆ. ಇದರಿಂದ ಮಕ್ಕಳ ಮುಂದಿನ ದಿನಗಳಲ್ಲಿ ತಂಬಾಕು ಸೆವನೆಗಳ ದಾಸರಾಗುತ್ತಾರೆ ಎಂದು ಅವರು ಹೇಳಿದರು.
 ಇಂದಿನ ದಿನಗಳಲ್ಲಿ ಯುವ ಸಮೂಹವು ಹೆಚ್ಚು ತಂಬಾಕು ಸೇವನೆ, ಬೀಡಿ, ಸಿಗರೇಟು, ಗುಟ್ಕಾ ಚಟಗಳಿಗೆ ಬಲಿಯಾಗುತ್ತಿದ್ದಾರೆ ಇದು ಮುಂದಿನ ದಿನಮಾನಗಳಲ್ಲಿ ಹೆಚ್ಚಾಗುವ ಸಂಭವ ಇದೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ಕೆಸಿಡಿ ಪ್ರಾಚಾರ್ಯ ಡಾ.ಡಿ.ಬಿ ಕರಡೋಣಿ ಅವರು ಮಾತನಾಡಿದರು. ಮನೋವೈದ್ಯ ಡಾ. ರಾಘವೇಂದ್ರ ಪಾಟೀಲ ಅವರು  ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ ಚಿತ್ತರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ಎಸ್.ಬಿ.ಕಳಸೂರಮಠ, ತಾಲೂಕು ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್. ಹಾಗೂ ಮಹಾವಿದ್ಯಾಲಯದ  ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article